NEWS

ಸಂಸದ ಯದುವೀ‌ರ್ ಮನವಿಗೆ ನಿರ್ಮಲಾ ಸ್ಪಂದನೆ

ಪಾಲನೆ ನ್ಯೂಸ್

ಮೈಸೂರು: ದೇಶದ ಆರ್ಥಿಕತೆಗೆ ಕೊಡುಗೆಗಳನ್ನು ನೀಡಲು ಪ್ರಮುಖ ಪಾತ್ರ ವಹಿಸುವ ನಗರಗಳ ಅಭಿ ವೃದ್ಧಿಗೆ ಒತ್ತು ನೀಡಲು ಮುಂದಾ ಗಿರುವ ಕೇಂದ್ರ ಸರ್ಕಾರ ಈಗ ಮೈಸೂರಿಗೂ ವಿಶೇಷ ಕೊಡುಗೆ ನೀಡುವ ಭರವಸೆ ನೀಡಿದೆ ಎಂದು ಸಂಸದ ಯದುವೀ‌ರ್ ಕೃಷ್ಣದತ್ತ ಚಾಮ ರಾಜ ಒಡೆಯ‌ರ್ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಕೇಂದ್ರ ಹಣ ಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಸಂಸದ ಯದುವೀರ್ ಅವರು, ಬಜೆಟ್‌ನಲ್ಲಿ ಘೋಷಣೆ ಮಾಡಿರುವ ‘ನಗರ ಆರ್ಥಿಕ ವಲಯ’ ಯೋಜನೆಗೆ ಮೈಸೂರು ನಗರವನ್ನೂ ಸೇರ್ಪಡೆ ಮಾಡ ಬೇಕು, ಮೈಸೂರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದೆ, ಅದನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಈ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ನಂತರ ಈ ಸಂಬಂಧ ಮಾಹಿತಿ ನೀಡಿರುವ ಸಂಸದರು, ನಗರ ಆರ್ಥಿಕ ವಲಯಕ್ಕೆ ಮೈಸೂರನ್ನು ಸೇರಿಸಬೇಕು ಎಂದು ಹಣಕಾಸು ಸಚಿವರಿಗೆ ಹಿಂದೆಯೇ ಸಲ್ಲಿಸಲಾಗಿತ್ತು. ಮನವಿ 7 ಏನಿದು ನಗರ ಆರ್ಥಿಕ ವಲಯ? ನಗರಾಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಪ್ರತಿ ವಲಯಕ್ಕೆ ವಾರ್ಷಿಕ 5 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗುತ್ತದೆ. ಈ ಹಣವನ್ನು ನಗರದ ಅಭಿ ವೃದ್ಧಿಗೆ ಬಳಸಲಾಗುತ್ತದೆ. ಖಾಸಗಿ-ಸರ್ಕಾರ ಸಹಭಾಗಿತ್ವ ದಲ್ಲಿ ಈ ಯೋಜನೆಗಳನ್ನು ರೂಪಿಸಲಾಗುವುದು. ಕೇಂದ್ರ ಸರ್ಕಾರ ಈಗಾಗಲೇ ಬೆಂಗ ಳೂರು, ಸೂರತ್, ವಾರಾಣಸಿ, ವಿಶಾಖಪಟ್ಟಣಂ, ಭುವನೇಶ್ವ‌ರ್, ಪುರಿ, ಕಟಕ್, ಕೊಯಮತ್ತೂರು, ಈರೋಡ್, ತಿರುಪೂ‌ರ್ ಇವುಗಳನ್ನು ಆಯ್ಕೆ ಮಾಡಿದೆ.‌

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಯುವ ಜನತೆ ಅಂಬಿಗರ ಚೌಡಯ್ಯ ರವರ ನಡೆ-ನುಡಿ ಜ್ಞಾನವನ್ನು ಪರಿಪೂರ್ಣವಾಗಿ ಅಳವಡಿಸಿಕೊಳ್ಳಬೇಕು

ಕೊಡಗಿನ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ ಪ್ರಕರಣ

ದೇಹ ಪಾಲನೆ

Leave a Comment