NEWS

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಎಚ್.ಪಿ.ವಿ . (HPV) ಲಸಿಕೆ ಪಡೆಯವಂತೆ ಜಾಗೃತಿ ಮೂಡಿಸಿ – ಡಾ. ಕುಮಾರ

ಪಾಲನೆ ನ್ಯೂಸ್

    ಮಂಡ್ಯ : 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ದೃಷ್ಟಿಯಿಂದ HPV ಲಸಿಕೆ ರಕ್ಷಣಾತ್ಮಕ ಲಸಿಕೆಯಾಗಿದ್ದು, 14 ರಿಂದ 15 ವರ್ಷದೊಳಗಿನ ಎಲ್ಲಾ ಹೆಣ್ಣು ಮಕ್ಕಳು ಕಡ್ಡಾಯವಾಗಿ ಲಸಿಕೆಯನ್ನು ಪಡೆಯುವಂತೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ರವರು ತಿಳಿಸಿದರು.

    ಇಂದು ಜಿಲ್ಲಾ ಕಛೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪ್ರಗತಿ ಹಾಗೂ ದಡಾರ ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮ ಕುರಿತು ಹಾಗೂ ಹೆಚ್.ಪಿ. ವಿ.ಲಸಿಕಾ ಅಭಿಯಾನದ ಅನುಷ್ಠಾನ ಮತ್ತು ಕಾರ್ಯಕ್ರಮ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಮುಂದಿನ ಒಂದು ತಿಂಗಳವರೆಗೆ 14 ರಿಂದ 15 ವರ್ಷದೊಳಗಿನ ಎಲ್ಲಾ ಹೆಣ್ಣು ಮಕ್ಕಳನ್ನು ಗುರುತಿಸಿ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

    ಮಕ್ಕಳಲ್ಲಿ ತಪ್ಪು ಗ್ರಹಿಕೆ ಮತ್ತು ಗೊಂದಲವನ್ನು ಹೋಗಲಾಡಿಸುವ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಲಸಿಕೆ ಪ್ರಯೋಜನದ ತಿಳುವಳಿಕೆ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು.

    ಪ್ರಾಥಮಿಕ ಅರೋಗ್ಯ ವೈದ್ಯಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ತಿಳುವಳಿಕೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು ಹಾಗೂ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ವಿರುವುದಿಲ್ಲ, ಹೆಚ್.ಪಿ. ವಿ. ಲಸಿಕೆ ಸುರಕ್ಷಿತ ಲಸಿಕೆಯಾಗಿದೆ.ದೇಹದಲ್ಲಿ ರೋಗನಿರೋಧಕಶಕ್ತಿ ಹೆಚ್ಚಾಗುತ್ತದೆ ಎಂಬ ಮಹತ್ವದ ಮಾಹಿತಿಯನ್ನು ತಿಳಿಸಬೇಕು ಎಂದು ಹೇಳಿದರು.

    ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು ಹೆಚ್.ಪಿ.ವಿ ಲಸಿಕೆಯನ್ನು ನೀಡುವುದರಿಂದ ಮುಂದಿನ ಎರಡು ತಿಂಗಳ ಅಭಿನಯದಲ್ಲಿ ಹೆಣ್ಣು ಮಕ್ಕಳ ಆರೋಗ್ಯ ದೃಷ್ಟಿಯಿಂದ ಕಡ್ಡಾಯವಾಗಿ ಲಸಿಕೆಯನ್ನು ಉಚಿತವಾಗಿ ನೀಡುವುದಕ್ಕೆ ಕ್ರಮವಹಿಸಬೇಕು. ಹಾಗೂ ಈ ಅಭಿಯಾನಕ್ಕೆ ಶಿಕ್ಷಣ ಇಲಾಖೆಯ ಸಹಕರಿಸಬೇಕು ಎಂದು ಸೂಚಿಸಿದರು.

    ಸಭೆಯಲ್ಲಿ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಕೆ ಮೋಹನ್, RCH ಅಧಿಕಾರಿ ಡಾ. ಕೆ. ಪಿ. ಅಶ್ವಥ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎಂ. ಎನ್. ಆಶಾಲತಾ, ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್, ಟಿ. ಹೆಚ್. ಓ ಡಾ. ಜವರೇಗೌಡ, ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ. ಬೆಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಜಿ.ವೇಣುಗೋಪಾಲ್ ಉಪಸ್ಥಿತರಿದ್ದರು.

    ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಮದ್ದೂರು ನ್ಯಾಯಾಲಯ ಕಾಮಗಾರಿಗಳ ಪರಿಶೀಲನೆ

    ವಿವಿಧ ಇಲಾಖೆಗಳ ಹುದ್ದೆಗಳಿಗೆ ಶೇ.17ರಿಂದ ಶೇ.15ಕ್ಕೆ ಸೀಮಿತಗೊಳಿಸಲಾಗಿದೆ

    ಶ್ರೀ ಕೃಷ್ಣ ದೇವರಾಯ ಜಯಂತಿ ಶುಭಾಶಯಗಳು

    Leave a Comment