ಪಾಲನೆ ನ್ಯೂಸ್
ಮಂಡ್ಯ: ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಮೇಲುಕೋಟೆ ವಿಧಾನ ಸಭಾ ಕ್ಷೇತ್ರ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ರವರು ತಿಳಿಸಿದರು.
ಇಂದು ಮೇಲು ಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರೌವೃತ್ತರಾಗಬೇಕು ಎಂದು ತಿಳಿಸಿದರು.
ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಲು ಸೂಚಿಸಿದರು

ಶೌಚಾಲಯ, ವೈದ್ಯಕೀಯ ಸೌಲಭ್ಯ ಮತ್ತು ಕೆಎಸ್ಆರ್ ಟಿ ಸಿ (KSRTC) ಬಸ್ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ನಿರ್ದೇಶನ ನೀಡಲಾಯಿತು.
ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಉತ್ಸವದ ಮೆರವಣಿಗೆ ಸುಗಮವಾಗಿ ಸಾಗಲು ಸೂಕ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಮಾರ್ಚ್ 28 ರಂದು ನಡೆಯುವ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವವು ಶ್ರೀ ಚಲುವನಾರಾಯಣಸ್ವಾಮಿಗೆ ವಜ್ರಖಚಿತ ಕಿರೀಟಧಾರಣೆ ಮಾಡಿ, ರತ್ನಖಚಿತ ಆಭರಣಗಳಿಂದ ಅಲಂಕರಿಸಿ, ರಾತ್ರಿ ವೇಳೆ ನಡೆಯುವ ಅದ್ಧೂರಿ ಉತ್ಸವದಲ್ಲಿ ಭಕ್ತಾದಿಗಳಿಗೆ ದರ್ಶನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಬ್ಯಾರಿಕೆಡ್ ವ್ಯವಸ್ಥೆ ಅಳವಡಿಸಬೇಕು ಮತ್ತು ಸುಚಿತ್ವ ಕಾಪಾಡಿಕೊಳ್ಳಬೇಕು ಹಾಗೂ ದೇವಸ್ಥಾನ ಒಳಗೆ ಮಾಧ್ಯಮದವರಿಗೆ ಪ್ರತ್ಯೇಕ ಗ್ಯಾಲರಿ ಅನ್ನು ಮಾಡುವಂತೆ ಸೂಚಿಸಿದರು.
ಏಪ್ರಿಲ್ 1 ರಂದು ಮೇಲುಕೋಟೆಯ ಪುರಾಣ ಪ್ರಸಿದ್ಧ ಪಂಚ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನಡೆಯುವುದರಿಂದ ಕಲ್ಯಾಣಿಯನ್ನು ವೀಕ್ಷಣೆ ಮಾಡಿ ಭಕ್ತಾದಿಗಳಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಬೇಕು ಹಾಗೂ ಭಕ್ತಾದಿಗಳಿಗೆ ಸ್ನಾನ ಗೃಹ ಮತ್ತು ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ ಹಾಗೂ ಲೈಟಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಮೇಲುಕೋಟೆ SCT ತಾಂತ್ರಿಕ ಶಿಕ್ಷಣ ಸಂಸ್ಥೆ ಹಿಂಭಾಗ ನಾಲ್ಕು ಚಕ್ರದ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುಬೇಕು ಹಾಗೂ ಪಾರ್ಕಿಂಗ್ ಸ್ಥಳದಲ್ಲಿ ಲೈಟಿಂಗ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಪಾರ್ಕಿಂಗ್ ಸ್ಥಳಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಿ ಸೂಚನ ಬೋರ್ಡ್ ಹಾಕಬೇಕು ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಮಾರ್ಚ್ 28 ರಂದು ಅರೋಗ್ಯ ಅಧಿಕಾರಿಗಳು ದೇವಸ್ಥಾನ, ಪಾರ್ಕಿಂಗ್, ದಾಸೋಹ ಭವನ 3 ಕಡೆ ಗ್ಯಾಲರಿ ಮಾಡಿ ಅರೋಗ್ಯ ಅಧಿಕಾರಿಗಳನ್ನು ನೇಮಿಸಬೇಕು ಮತ್ತು ಪ್ರಾಥಮಿಕ ಚಿಕಿತ್ಸೆಯ ಎಲ್ಲಾ ರೀತಿಯ ಔಷಧಿಗಳ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಡಾ. ಶೋಭಾರಾಣಿ ವಿ. ಜೆ, ಮುಜರಾಯಿ ಇಲಾಖೆಯ ತಹಶೀಲ್ದಾರ್ ತಮ್ಮಣ್ಣ ಗೌಡ, ಮೇಲುಕೋಟೆ ದೇವಸ್ಧಾನದ ಕಾರ್ಯನಿರ್ವಹಕಧಿಕಾರಿ ಶೀಲಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
