NEWS

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಪಾಲನೆ ನ್ಯೂಸ್‌

ಮಂಡ್ಯ : ಜಿಲ್ಲೆಯಲ್ಲಿ 2026ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಇಂದಿನಿಂದ (ಮಾರ್ಚ್ 18, 2026) ಆರಂಭವಾಗಿದ್ದು, ಜಿಲ್ಲಾಧಿಕಾರಿ ಡಾ. ಕುಮಾರ ಅವರು ಇಂದು ಮಂಡ್ಯ ನಗರದಲ್ಲಿರುವ ಮಾಜಿ ಪುರಸಭೆ ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಿಸಿಟಿವಿ ಅಳವಡಿಕೆ, ಆಸನ ವ್ಯವಸ್ಥೆ, ಭದ್ರತೆ, ಮತ್ತು ಆರೋಗ್ಯ ಸಿಬ್ಬಂದಿ ನಿಯೋಜನೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಸೂಕ್ತ ವಾತಾವರಣ ಕಲ್ಪಿಸಲು ಹಾಗೂ ಮುಖ್ಯ ಅಧೀಕ್ಷಕರು ಹಾಗೂ ಪರೀಕ್ಷಾ ಸಿಬ್ಬಂದಿಗಳು ಜವಬ್ದಾರಿಯಿಂದ ಕೆಲಸ ನಿರ್ವಹಣೆ ಮಾಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದೆ, ಅತ್ಯಂತ ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಡಿಡಿಪಿಐ ಜಿ. ಎ. ಲೋಕೇಶ್ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕ್ರೆಡಿಟ್ – ಐ ವರ್ಷಗೆ ನ್ಯಾಷನಲ್ ಅಚಿವರ್ಸ್ ಪ್ರಶಸ್ತಿ

ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೊಳಿಸುವ ಮಸೂದೆ ವಿರೋಧ

25ರಂದು ನರಸಿಂಹಸ್ವಾಮಿ ಬ್ರಹ್ಮರಥೋತ್ಸವ

Leave a Comment