ಪಾಲನೆ ನ್ಯೂಸ್
ಮಂಡ್ಯ: ಕಂದಾಯ ಇಲಾಖೆಯ ಪೌತಿ ಖಾತೆ ಆಂದೋಲನವನ್ನು (ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನಿನ ಖಾತೆಯನ್ನು ವಾರಸುದಾರರಿಗೆ ವರ್ಗಾಯಿಸುವ ಪ್ರಕ್ರಿಯೆ) ಚುರುಕುಗೊಳಿಸಲು ಮತ್ತು ಕೆಲಸವನ್ನು ಸುಲಭಗೊಳಿಸಲು ಕಂದಾಯ ಇಲಾಖೆಯ ತಾಲ್ಲೂಕಿನ 51 ರಾಜಸ್ವ ನಿರೀಕ್ಷರಿಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ತಾಲ್ಲೂಕುವಾರು ಕಂದಾಯ ಇಲಾಖೆಯ 51 ರಾಜಸ್ವ ನಿರೀಕ್ಷಕರಿಗೆ ಸರ್ಕಾರ ಲ್ಯಾಪ್ ಟಾಪ್ ನೀಡಿದ್ದು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಹಾಗೂ ಲ್ಯಾಪ್ ಟಾಪ್ ಅನ್ನು ಕಚೇರಿ ಕೆಲಸಕ್ಕೆ ಬಳಸಿ ಕೊಳ್ಳಬೇಕು ಹಾಗೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪೌತಿ -ಖಾತೆ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಸಮಸ್ಯೆಗಳು ಉಂಟಾಗುತ್ತಿರುವುದರಿಂದ ಸರ್ಕಾರ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ಅನ್ನು ವಿತರಿಸಿದ್ದು ಅಧಿಕಾರಿಗಳು ನಿಮ್ಮ ಕಾರ್ಯ ವೈಖರಿಯನ್ನು ಚುರುಕು ಗೊಳಿಯುವಂತೆ ಹಾಗೂ ಸದುಪಯೋಗ ಮಾಡಿಕೊಳ್ಳುವಂತೆ ಎಂದು ತಿಳಿಸಿದರು.
ಪೌತಿ ಖಾತೆ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಬೇಕು ಹಾಗೂ ಜಿಲ್ಲೆಯು ಮಾದರಿಯಾಗಿ ಸಾಗುವತ್ತ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ. ಸಿ. ಶಿವಾನಂದಮೂರ್ತಿ ರವರು ಮಾತನಾಡಿ ಅಧಿಕಾರಿಗಳಿಗೆ ನೀಡಿರುವ ಲ್ಯಾಪ್ ಟಾಪ್ ಅನ್ನು ಸದುಪಯೋಗ ಮಾಡಿಕೊಳ್ಳಿ ಹಾಗೂ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕಂದಾಯ ಇಲಾಖೆಯ ಅಧಿಕಾರಿಗಳು ಜನಸಾಮಾನ್ಯರಿಗೆ ತೊಂದರೆಯಗದಂತೆ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರವೇ ಪರಿಹರಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಉಪವಿಭಾಗಧಿಕಾರಿ ಎಸ್.ಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಶ್ರೀನಿವಾಸ್, ಜಿಲ್ಲಾ ಎಲ್ಲಾ ತಾಲ್ಲೂಕು ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
