NEWS

ಮುಡಾ 50:50 ನಿವೇಶನಗಳ ಹಂಚಿಕೆ ಆರೋಪ ಸಿಎಂ, ಮತ್ತವರ ಕುಟುಂಬಕ್ಕೆ ನೋಟಿಸ್

ಪಾಲನೆ ನ್ಯೂಸ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ ‘ಬಿ’ ರಿಪೋರ್ಟ್ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿರುವ ಅರ್ಜಿ ಸಂಬಂಧ ಲೋಕಾಯುಕ್ತ, ಜಾರಿ ನಿರ್ದೇಶನಾಲಯ ಹಾಗೂ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಗುರುವಾರ ನೋಟಿಸ್ ಜಾರಿ ಮಾಡಿದೆ.

ಖಾಸಗಿ ದೂರುದಾರರಾಗಿರುವ ಸ್ನೇಹ ಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ನಡೆಸಿತು. 6 ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿತ್ತು. ‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಡಾ. ಬಾಬು ಜಗಜೀವನ್ ರಾಂ ರವರ ಆದರ್ಶ ಹಾಗೂ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು

ವಿಕೆಟ್ ಕೀಪರ್ -ಆರಂಭಿಕ ಸಂಜು ಸ್ಯಾಟ್ಸನ್ ಮತ್ತು ವೇಗಿ ಜಸ್‌ಪ್ರೀತ್ ಬುಮ್ರಾ ಐಸಿಸಿ ಪ್ರಶಸ್ತಿ ರೇಸ್‌ನಲ್ಲಿ

ಎಚ್.ಡಿ.ಕುಮಾರಸ್ವಾಮಿ ಸಚಿವರಾಗಿ ಕಾರ್ಯನಿರ್ವಹಿಸಲು ಮಂಡ್ಯ ಜಿಲ್ಲೆಯ ಜನತೆ ಕಾರಣ : ನಿಖಿಲ್

Leave a Comment